ಮಾರ್ಕನು 8:15
TSK
ಯೇಸು ಅವರಿಗೆ, ‹“ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ”› ಎಂದು ಎಚ್ಚರಿಸಿದನು.
TSK
مراجع Treasury of Scripture Knowledge في ಕನ್ನಡ IRV.
ಯೇಸು ಅವರಿಗೆ, ‹“ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ”› ಎಂದು ಎಚ್ಚರಿಸಿದನು.
ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿಯೂ, ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿಮಿತ್ತವಾಗಿಯೂ ಯೋಹಾನನಿಂದ ಗದರಿಸಲ್ಪಟ್ಟಿದರಿಂದ,
¶ ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಯೇಸುವಿಗೆ, “ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ” ಎಂದು ಹೇಳಲು,
ಹೆರೋದನಿಗೂ ಸಹ ಕಾಣಲಿಲ್ಲ. ಅದಕಾರಣ ಈತನನ್ನು ಹಿಂತಿರುಗಿ ನಮ್ಮ ಬಳಿಗೆ ಕಳುಹಿಸಿದನಲ್ಲಾ. ಆದುದರಿಂದ ಈತನು ಮರಣದಂಡನೆಗೆ ಯೋಗ್ಯವಾದದ್ದೇನೂ ಮಾಡಿದವನಲ್ಲವೆಂದಾಯಿತು.
¶ ಆ ಸಮಯದಲ್ಲೇ ಅರಸನಾದ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸೆಪಡಿಸುವುದಕ್ಕೆ ಕೈಹಾಕಿದನು.