TSK

TSK · ಮತ್ತಾಯನು 14:9

مراجع Treasury of Scripture Knowledge في ಕನ್ನಡ IRV.

العودة إلى المقطع

ಇದಲ್ಲದೆ ಅವನು ಯೆಹೋವನಿಗೆ, “ನೀನು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ

¶ ಇಸ್ರಾಯೇಲರೆಲ್ಲರೂ ಮಿಚ್ಪೆಯಲ್ಲಿದ್ದಾಗ ತಾವು ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವುದಿಲ್ಲವೆಂದು ಆಣೆಯಿಟ್ಟಿದ್ದರು.

¶ ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.

ಇಸ್ರಾಯೇಲ್ಯರ ರಕ್ಷಕನಾದ ಯೆಹೋವನ ಆಣೆ, ಪಾಪಮಾಡಿದವನು ನನ್ನ ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು” ಎಂದು ಹೇಳಿದನು; ಜನರು ಏನೂ ಮಾತನಾಡದೆ ಮೌನವಾಗಿದ್ದರು.

ಆಗ ದಾವೀದನು ಅಬೀಗೈಲಳಿಗೆ, “ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ.

ಇದಲ್ಲದೆ ಅವನು, “ನಾನು ಈ ಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದಿಂದ ಬೇರ್ಪಡಿಸದೆ ಹೋದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟುಕೊಂಡನು.

ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ಇದರಿಂದ ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಆಲೋಚಿಸುತ್ತಿದ್ದನು.

ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.

¶ ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು.

ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.

ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು.

ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.