TSK

TSK · ಮತ್ತಾಯನು 16:14

مراجع Treasury of Scripture Knowledge في ಕನ್ನಡ IRV.

العودة إلى المقطع

ತನ್ನ ಸೇವಕರಿಗೆ, “ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ” ಎಂದು ಹೇಳಿದನು.

ಕೆಲವರು, “ಇವನು ಎಲೀಯನೆಂತಲೂ” ಮತ್ತೆ ಕೆಲವರು, “ಇವನು ಪ್ರಾಚೀನ ಕಾಲದ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ” ಹೇಳಿದರು.

ಎಲೀಯನು ಕಾಣಿಸಿಕೊಂಡನೆಂದು ಕೆಲವರೂ, ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆಂದು ಮತ್ತೆ ಕೆಲವರೂ ಹೇಳಿಕೊಳ್ಳುತ್ತಿದ್ದರು.

ಅದಕ್ಕೆ ಅವರು, “ಹಾಗಾದರೆ ನೀನು ಯಾರು? ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ,” ಅಂದನು.

ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿದಾಗ “ನಿಜವಾಗಿಯೂ ಈತನು ಪ್ರವಾದಿಯಾಗಿದ್ದಾನೆ” ಎಂದರು.