¶ ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು.
TSK
TSK · ಮತ್ತಾಯನು 16:24
مراجع Treasury of Scripture Knowledge في ಕನ್ನಡ IRV.
ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, ‹“ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು”› ಎಂದು ಹೇಳಿದನು.
ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, ‹“ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.›
¶ ಅವರು ಯೇಸುವನ್ನು ಕರೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ, ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕರೆದು, ಶಿಲುಬೆಯನ್ನು ಅವನ ಮೇಲೆ ಹೊರಿಸಿ ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.
ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.
ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.
ನಂಬಿಕೆಯಿಂದಲೇ ಮೋಶೆಯು ದೊಡ್ಡವನಾದ ಮೇಲೆ ಫರೋಹನ ಪುತ್ರಿಯ ಮಗನೆನಿಸಿಕೊಳ್ಳುವುದು ಬೇಡವೆಂದುಕೊಂಡನು.