¶ ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, ‹“ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.›
TSK
TSK · ಮತ್ತಾಯನು 17:20
مراجع Treasury of Scripture Knowledge في ಕನ್ನಡ IRV.
ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, “ಕರ್ತನೇ, ನನ್ನನ್ನು ಕಾಪಾಡು” ಎಂದು ಕೂಗಿಕೊಂಡನು.
ಅದಕ್ಕೆ ಯೇಸು, ‹“ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ”› ಅಂದನು.
‹ಅದು ಸಾಸಿವೆ ಕಾಳಿನಂತಿರುತ್ತದೆ. ನೆಲದಲ್ಲಿ ಬಿತ್ತುವಾಗ ಅದು ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ.›
‹ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.›
ಕರ್ತನು, ‹“ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು”› ಅಂದನು.
ಯೇಸು ಆಕೆಗೆ, ‹“ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?”› ಎಂದು ಉತ್ತರ ಕೊಟ್ಟನು
ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ.