ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
TSK
TSK · ಮತ್ತಾಯನು 18:20
مراجع Treasury of Scripture Knowledge في ಕನ್ನಡ IRV.
ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ.
ಯೇಸು, ‹“ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ;›‹ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ”› ಎಂದನು.
ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ ‹“ಸಮಾಧಾನವಾಗಲಿ ಎಂದನು”›
¶ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದ ಸಭೆಗೆ ಪೌಲ ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ, ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ.
ಅದು, ‹“ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು”› ಎಂದು ನುಡಿಯಿತು.
ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.