TSK

TSK · ಮತ್ತಾಯನು 18:4

مراجع Treasury of Scripture Knowledge في ಕನ್ನಡ IRV.

العودة إلى المقطع

ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.

‹ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ.›

‹ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಬೇಕು.›

‹ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು”› ಅಂದನು.

¶ ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”