ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.
TSK
TSK · ಮತ್ತಾಯನು 19:16
مراجع Treasury of Scripture Knowledge في ಕನ್ನಡ IRV.
ಯೇಸು ಅವರನ್ನು ದೃಷ್ಟಿಸಿ ನೋಡಿ ‹“ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ”› ಅಂದನು.
‹ಮತ್ತು ಅನೀತಿವಂತರಾದ ಇವರು›‹ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.›
¶ ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು,
‹ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು.›
‹ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.›
‹ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.›
‹ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.›
‹ನೀನು ಯಾರಾರನ್ನು ಕೊಟ್ಟಿದ್ದೀಯೋ›‹ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.›
ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.
ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.
ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.
ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ.
ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ.
ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.