TSK

TSK · ಮತ್ತಾಯನು 19:21

مراجع Treasury of Scripture Knowledge في ಕನ್ನಡ IRV.

العودة إلى المقطع

¶ ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.

¶ ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.

ಅವರಿಗೆ ಆತನು, ‹“ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು”› ಎಂದು ಹೇಳುತ್ತಲೇ,

‹ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.›

ಯೇಸು ಅವನಿಗೆ, ‹“ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ”› ಎಂದು ಹೇಳಿದನು.

ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ ‹“ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.›

ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, ‹“ನನ್ನನ್ನು ಹಿಂಬಾಲಿಸು”› ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.

ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, ‹“ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು”› ಎಂದು ಹೇಳಿದನು.

‹ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.›

‹ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.›

¶ ‹“ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.›

‹ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.›

ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು.

¶ ಇಷ್ಟರೊಳಗೆ ನಾನಿದೆಲ್ಲವನ್ನೂ ಪಡಕೊಂಡು ಪರಿಪೂರ್ಣತೆಗೆ ಬಂದವನೆಂದು ಹೇಳುವುದಿಲ್ಲ. ಆದರೆ ನಾನು ಯಾವುದನ್ನು ಹೊಂದುವುದಕ್ಕಾಗಿ ಕ್ರಿಸ್ತ ಯೇಸುವು ನನ್ನನ್ನು ಹಿಡಿದುಕೊಂಡನೋ ಅದನ್ನು ಹೊಂದುವುದಕ್ಕೋಸ್ಕರ ಪ್ರಯತ್ನಿಸುತ್ತಾ ಇದ್ದೇನೆ.

ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.