ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.
TSK
TSK · ಮತ್ತಾಯನು 19:27
مراجع Treasury of Scripture Knowledge في ಕನ್ನಡ IRV.
¶ ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, ‹“ನನ್ನನ್ನು ಹಿಂಬಾಲಿಸು”› ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
ಯೇಸು ಅವರಿಗೆ, ‹“ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು”› ಎಂದು ಹೇಳಿದನು.
ಪೇತ್ರನು ಆತನಿಗೆ, “ಇಗೋ ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ” ಎಂದು ಹೇಳುವುದಕ್ಕೆ ಪ್ರಾರಂಭಿಸಿದನು.
¶ ಅನಂತರ ಯೇಸು ಹೊರಟು ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು, ‹“ನನ್ನನ್ನು ಹಿಂಬಾಲಿಸು”› ಎಂದು ಅವನನ್ನು ಕರೆಯಲು,
‹ಆದರೆ ಅವನು ತನ್ನ ತಂದೆಗೆ, ‘ನೋಡು, ಇಷ್ಟು ವರ್ಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.›
ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.