ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.
TSK
TSK · ಮತ್ತಾಯನು 19:28
مراجع Treasury of Scripture Knowledge في ಕನ್ನಡ IRV.
¶ “ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು.
ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,
¶ ಅವರು ಆ ದೇವಾಲಯದ ಪ್ರತಿಷ್ಠೆಗೋಸ್ಕರ ನೂರು ಹೋರಿ, ಇನ್ನೂರು ಟಗರು, ನಾನೂರು ಕುರಿಮರಿ ಇವುಗಳನ್ನೂ, ಇಸ್ರಾಯೇಲರ ದೋಷಪರಿಹಾರಾರ್ಥವಾಗಿ ಅವರ ಕುಲಗಳ ಸಂಖ್ಯಾನುಸಾರ ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.
“ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.
ಆತನು ಆಕೆಯನ್ನು, ‹“ನಿನ್ನ ಅಪೇಕ್ಷೆ ಏನು?”› ಎಂದು ಕೇಳಲು ಆಕೆ ಆತನಿಗೆ, “ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು” ಅಂದಳು.
‹ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು.›
ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪವಾದ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅನರ್ಹರಾಗಿದ್ದೀರೋ?
ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.
‹ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು›‹ಕಡೆಯವರೆಗೂ ನಡಿಸುತ್ತಾನೋ,›‹ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು.›‹‘ಅವನು›‹ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು,›‹ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆ›‹ಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು.›
ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.
¶ ಪರಲೋಕದಲ್ಲಿ ಒಂದು ಮಹಾ ಚಿಹ್ನೆಯು ಕಾಣಿಸಿತು. ಸ್ತ್ರೀಯೊಬ್ಬಳು ಸೂರ್ಯಭೂಶಿತಳಾಗಿದ್ದಳು. ಆಕೆಯ ಪಾದದಡಿಯಲ್ಲಿ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳಿಂದ ಮಾಡಿದ್ದ ಒಂದು ಕಿರೀಟವಿತ್ತು.
¶ ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.
ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು.