TSK

TSK · ಮತ್ತಾಯನು 19:7

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.

ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನಾನು ಪತ್ನಿತ್ಯಾಗವನ್ನೂ, ಹೆಂಡತಿಗೆ ಅನ್ಯಾಯ ಮಾಡುವವನನ್ನೂ ಹಗೆಮಾಡುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಆದಕಾರಣ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ದ್ರೋಹಮಾಡಬೇಡಿರಿ.”

‹ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ.›