TSK

TSK · ಮತ್ತಾಯನು 2:4

مراجع Treasury of Scripture Knowledge في ಕನ್ನಡ IRV.

العودة إلى المقطع

ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡೆಸುತ್ತಿದ್ದರು; ಲೇವಿಯರಲ್ಲಿ ಕೆಲವರು ಲೇಖಕರೂ, ಕೆಲವರು ಅಧಿಕಾರಿಗಳೂ, ದ್ವಾರಪಾಲಕರೂ ಲೇವಿಯರೇ ಆಗಿದ್ದರು.

ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು.

¶ ಯಾಜಕನು ಮತ್ತು ಶಾಸ್ತ್ರಿಯೂ, ಇಸ್ರಾಯೇಲರಿಗಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆಗಿದ್ದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರ.

ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ ಇವರು ಯೇಷೂವನ ಕಾಲದಲ್ಲಿ ಯಾಜಕರ ಮತ್ತು ಅವರ ಬಂಧುಗಳ ಪ್ರಧಾನರು.

ಹೀಗಿರಲು ‘ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ’ ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ.

‹ಏಕೆಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು.›

ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.

¶ ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು

¶ ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,

¶ ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.

ಯೇಸು ಅವನಿಗೆ ಹೇಳಿದ್ದೇನಂದರೆ, ‹“ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಈ ಸಂಗತಿಗಳು ತಿಳಿಯುವುದಿಲ್ಲವೋ?›

ಶಾಸ್ತ್ರಿಗಳೂ ಮತ್ತು ಫರಿಸಾಯರೂ ವ್ಯಭಿಚಾರದಲ್ಲಿ ಸಿಕ್ಕಿಬಿದ್ದ ಒಬ್ಬ ಹೆಂಗಸನ್ನು ಹಿಡಿದು ಆತನ ಬಳಿಗೆ ತಂದು ಆಕೆಯನ್ನು ಅವರ ಗುಂಪಿನ ಮಧ್ಯದಲ್ಲಿ ನಿಲ್ಲಿಸಿ;

¶ ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು.

¶ ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; “ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು” ಎಂದು ವಾದಿಸಿದರು.