TSK

TSK · ಮತ್ತಾಯನು 20:14

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಹಿತಕರವಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿರುವೆ. ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದ್ದೀ. ಆದುದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂದು ಹೇಳಿದನು.

¶ ‹“ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

¶ ‹“ಇದಲ್ಲದೆ›‹ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

‹ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.›

ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.