ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.
TSK
TSK · ಮತ್ತಾಯನು 20:25
مراجع Treasury of Scripture Knowledge في ಕನ್ನಡ IRV.
¶ “ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.
ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು.
ಅವರಿಗೆ, ‹“ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ, ‹“ಅನ್ಯಜನಗಳ ಅಧಿಪತಿಗಳು ಎನ್ನಿಸಿಕೊಳ್ಳುವವರು ಅವರ ಮೇಲೆ ದೊರೆತನ ಮಾಡುತ್ತಾರೆ. ಮತ್ತು ಅವರಲ್ಲಿ ಮುಖ್ಯಸ್ಥರು ಅವರ ಮೇಲೆ ಅಧಿಕಾರ ನಡೆಸುತ್ತಾರೆ ಎಂದು ನೀವು ಬಲ್ಲಿರಷ್ಟೆ.›
¶ ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲುಹೊದಿಕೆಯನ್ನು ಹಾಕಿಕೊಂಡು, ಪುನಃ ಕುಳಿತುಕೊಂಡು ಅವರಿಗೆ ಹೇಳಿದ್ದೇನಂದರೆ, ‹“ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?›