TSK

TSK · ಮತ್ತಾಯನು 20:7

مراجع Treasury of Scripture Knowledge في ಕನ್ನಡ IRV.

العودة إلى المقطع

ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.

‹ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೆಯ ಯಜಮಾನನು ಸಿಟ್ಟುಗೊಂಡು ಆಳಿಗೆ, ‘ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು, ಅಂಗಹೀನರು, ಕುರುಡರು, ಕುಂಟರು, ಇಂಥವರನ್ನು ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.›

“ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ.

¶ ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?

¶ ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.

ಯಾಕೆಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ.

ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.