TSK

TSK · ಮತ್ತಾಯನು 21:32

مراجع Treasury of Scripture Knowledge في ಕನ್ನಡ IRV.

العودة إلى المقطع

ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.

¶ “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.

‹ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ.›

ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಲ್ಲವೇ’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.

ಆಗ ಆ ಊರಿನಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಬಂದಿದ್ದಾನೆಂದು ತಿಳಿದು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು,

ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; ‘ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.

¶ ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.

ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.