ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.
TSK
TSK · ಮತ್ತಾಯನು 22:13
مراجع Treasury of Scripture Knowledge في ಕನ್ನಡ IRV.
ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.
‹ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು”› ಎಂದು ಹೇಳಿದನು.
‹ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ,›‹ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’”› ಅಂದನು.
‹ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.›
‹ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’›
‹“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು”› ಎಂದು ಹೇಳಿದನು.
ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; “ಈ ನಡುಕಟ್ಟು ಯಾವನದೋ ಅವನನ್ನು ‘ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ’” ಹೇಳಿದನು.
ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.
ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.
ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.