TSK

TSK · ಮತ್ತಾಯನು 24:42

مراجع Treasury of Scripture Knowledge في ಕನ್ನಡ IRV.

العودة إلى المقطع

¶ ‹“ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು,›

‹ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.›

‹ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವು›‹ಎಚ್ಚರವಾಗಿರಿ,›‹ಜಾಗರೂಕರಾಗಿರಿ.›

‹ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ”› ಅಂದನು.

¶ ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.

¶ ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.

¶ ‹“ಎಚ್ಚರವಾಗು, ಸಾಯುವ ಹಾಗಿರುವ›‹ಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಪರಿಪೂರ್ಣವಾದದ್ದೆಂದು ನನಗೆ ಕಂಡುಬರಲಿಲ್ಲ.›