ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನು ಹೇಳುವುದೇನೆಂದರೆ, ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ; ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು.
TSK
TSK · ಮತ್ತಾಯನು 25:10
مراجع Treasury of Scripture Knowledge في ಕನ್ನಡ IRV.
ಸಮುದ್ರದಿಂದ ಸಮುದ್ರಕ್ಕೆ; ಉತ್ತರದಿಂದ ಪೂರ್ವಕ್ಕೂ ಬಳಲುತ್ತಾ ಹೋಗುವರು ಯೆಹೋವನ ವಾಕ್ಯವನ್ನು ಹುಡುಕುತ್ತಾ ಓಡಾಡುವರು, ಆದರೂ ಅದು ಸಿಕ್ಕುವುದಿಲ್ಲ.
‹ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು.›
‹ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ.›
ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ.
ನನ್ನ ವಿಶ್ರಾಂತಿಯಲ್ಲಿ ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ?
¶ ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.
¶ ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, ‹“ಹೌದು ನಾನು ನಿಜವಾಗಿ›‹ಬೇಗನೇ ಬರುತ್ತೇನೆ!”› ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ.