ಆದಕಾರಣ ನಾನು ನನ್ನ ಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು, ಅವಳ ಮಾನವನ್ನು ಮರೆಮಾಡುವುದಕ್ಕೆ ನಾನು ಕೊಟ್ಟ ಉಣ್ಣೆ, ನಾರುಗಳನ್ನು ಹಿಂತೆಗೆದುಕೊಳ್ಳುವೆನು.
TSK
TSK · ಮತ್ತಾಯನು 25:29
مراجع Treasury of Scripture Knowledge في ಕನ್ನಡ IRV.
ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.
‹ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು”› ಅಂದನು.
‹ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು.›
¶ ‹“ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.›
‹ಅವರು, ‘ದೊರೆಯೇ, ಹತ್ತು ನಾಣ್ಯಗಳು ಅವನಲ್ಲಿ ಅವೆಯಲ್ಲಾ’ ಎಂದು ಅವನಿಗೆ ಹೇಳಿದರು.›
‹ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.›