TSK

TSK · ಮತ್ತಾಯನು 25:31

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ.

ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.

ಯೇಸು ಅವರಿಗೆ, ‹“ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ›‹ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.›

ಯೇಸು ಪ್ರತ್ಯುತ್ತರವಾಗಿ, ‹“ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ›‹ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ”› ಅಂದನು.

¶ ಯೇಸುವು ‹“ಹೌದು ನಾನೇ!› ‹“ಇದಲ್ಲದೆ›‹ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ,› ‹ಆಕಾಶದ ಮೇಘಗಳಲ್ಲಿ ಬರುವುದನ್ನೂ› ‹ನೀವು ನೋಡುವಿರಿ”› ಎಂದನು.

‹ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು”› ಎಂದು ಹೇಳಿದನು.

‹ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ.›

ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು.

ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ.

¶ ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.

¶ ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.