ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.
TSK
TSK · ಮತ್ತಾಯನು 25:35
مراجع Treasury of Scripture Knowledge في ಕನ್ನಡ IRV.
¶ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.
ಗತಿಯಿಲ್ಲದವನು ನನ್ನನ್ನು ಹರಸುತ್ತಿದ್ದನು, ವಿಧವೆಯ ಹೃದಯವನ್ನು ಉತ್ಸಾಹಗೊಳಿಸುತ್ತಿದ್ದೆನು.
ಪರಸ್ಥಳದವನು ಬಯಲಿನಲ್ಲಿ ಇಳಿದುಕೊಳ್ಳಲಿಲ್ಲವಲ್ಲಾ, ದಾರಿಗೆ ನನ್ನ ಮನೆಯ ಬಾಗಿಲುಗಳನ್ನು ತೆರೆದಿದ್ದೆನಷ್ಟೆ.
ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.
ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು.
ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.
ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು,
ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.
ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,
ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?
‹ಅದಕ್ಕೆ ಉತ್ತರವಾಗಿ ಅರಸನು,›‹‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.›
‹ಬಡವರು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರಲ್ಲಾ, ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.›
‹ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.›
ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ “ಹಬ್ಬಕ್ಕೆ ನಮಗೆ ಅಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ” ಎಂದು ಅಂದುಕೊಂಡರು.
¶ ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.
ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.
ನನಗೂ ಮತ್ತು ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ, ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
ನೀವು ದೇವರ ಮೇಲಣ ನಂಬಿಕೆಯಲ್ಲಿ, ವಾಕ್ಚಾತುರ್ಯದಲ್ಲಿ, ಜ್ಞಾನದಲ್ಲಿ, ಸಕಲ ವಿಧವಾದ ಆಸಕ್ತಿಯಲ್ಲಿ ಮತ್ತು ನಮ್ಮ ಪ್ರೇರಣೆಯಿಂದ ನಿಮ್ಮಲ್ಲಿ ಹುಟ್ಟಿದ ಪ್ರೀತಿಯಲ್ಲಿ ಹೇಗೆ ಸಮೃದ್ಧರಾಗಿದ್ದೀರೋ ಹಾಗೆಯೇ ಈ ಧರ್ಮಕಾರ್ಯದಲ್ಲಿಯೂ ಸಮೃದ್ಧರಾಗಿ ಮುಂದುವರೆಯಿರಿ.
ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.
¶ ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.
ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.
ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ,
ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.