TSK

TSK · ಮತ್ತಾಯನು 25:44

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಸೌಲನು ಸಮುವೇಲನಿಗೆ, “ಏನು? ನಾನು ಯೆಹೋವನ ಮಾತನ್ನು ಕೇಳಲಿಲ್ಲವೋ? ಆತನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲಾ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದು ತಂದೆನು.

ನೀನಾದರೋ, “ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ” ಎಂದುಕೊಂಡಿದ್ದಿ; “ನಾನು ಪಾಪಮಾಡಲಿಲ್ಲ” ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು.

¶ ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ. “ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು. ಅವರೇ ಆತನಿಗೆ ಇಷ್ಟ. ನ್ಯಾಯತೀರಿಸುವ ದೇವರು ಎಲ್ಲಿದ್ದಾನೆ?” ಎಂದು ನೀವು ಕೇಳುವುದರಿಂದ ಆತನ ಗಮನದಲ್ಲಿ ಇದ್ದೀರಿ.

‹ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.›

ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು,