TSK

TSK · ಮತ್ತಾಯನು 25:5

مراجع Treasury of Scripture Knowledge في ಕನ್ನಡ IRV.

العودة إلى المقطع

ರಾತ್ರಿಯಲ್ಲಿ ಹಾಸಿಗೆಯ ಮೇಲೆ ನನ್ನ ಪ್ರಾಣಪ್ರಿಯನನ್ನು ಹುಡುಕಿದೆನು, ಎಷ್ಟು ಹುಡುಕಿದರೂ ಸಿಕ್ಕಲಿಲ್ಲ.

“ನನ್ನ ಒಳಂಗಿಯನ್ನು ತೆಗೆದೆನಲ್ಲಾ, ಅದನ್ನು ಹೇಗೆ ಹಾಕಿಕೊಂಡೇನು? ಪಾದಗಳನ್ನು ತೊಳೆದುಕೊಂಡೆನಲ್ಲಾ, ಅವುಗಳನ್ನು ಹೇಗೆ ಕೊಳೆಮಾಡಿಕೊಳ್ಳಲಿ?” ಎಂದು ನಾನು ಅಂದುಕೊಂಡಾಗ,

ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.

‹ಬಹುಕಾಲದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು›

ಆತನು ತಿರುಗಿ ಬಂದಾಗಲೂ ಅವರು ನಿದ್ದೆಮಾಡುವುದನ್ನು ಕಂಡನು; ಅವರ ಕಣ್ಣುಗಳು ಭಾರವಾಗಿದ್ದವು.

‹ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,›

¶ ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, ‹“ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.›

ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.

ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.

“ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪೂರ್ವಿಕರು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?” ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು.