¶ ಅವರು ದಾರಿ ಬಿಡು ಎಂದು ಹೇಳಿ, “ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ” ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು.
TSK
TSK · ಮತ್ತಾಯನು 26:61
مراجع Treasury of Scripture Knowledge في ಕನ್ನಡ IRV.
¶ ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಯೇಹುವು, “ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ” ಎಂದು ಉತ್ತರಕೊಟ್ಟನು.
ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”
ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!
ಆದರೆ ಫರಿಸಾಯರು ಅದನ್ನು ಕೇಳಿ, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ” ಅಂದರು.
“ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು.
“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.
ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು, ಆದರೆ ಈತನು ಎಲ್ಲಿಯವನೋ ನಮಗೆ ತಿಳಿಯದು” ಎಂದರು.
ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.
¶ ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.