ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.
TSK
TSK · ಮತ್ತಾಯನು 26:64
مراجع Treasury of Scripture Knowledge في ಕನ್ನಡ IRV.
‹ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.›
¶ ‹“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;›
¶ ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು.
‹ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.›
ಅದಕ್ಕೆ ಯೇಸು ‹“ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,”› ಎಂದನು.
“ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.
ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.
ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
¶ ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.