TSK

TSK · ಮತ್ತಾಯನು 27:25

مراجع Treasury of Scripture Knowledge في ಕನ್ನಡ IRV.

العودة إلى المقطع

ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.

ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗದಂತೆ; ಆ ದೋಷವು ನಿಮ್ಮದಾಗದಂತೆ ನೀವು ಹೀಗೆ ಮಾಡಬೇಕು.

ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು; ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಯಾರಾದರೂ ಕೈ ಮಾಡಿದ್ದಾದರೆ ಆ ರಕ್ತಾಪರಾಧವು ನಮ್ಮ ತಲೆಯ ಮೇಲೆ ಇರುವುದು.

¶ ಸ್ವಲ್ಪ ಹೊತ್ತಾದ ಮೇಲೆ ಈ ವರ್ತಮಾನವು ದಾವೀದನಿಗೆ ಮುಟ್ಟಿತು. ಆಗ ಅವನು, “ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ, ನನ್ನ ರಾಜ್ಯವೂ ಯೆಹೋವನ ಮುಂದೆ ಸದಾ ನಿರ್ದೋಷಿಗಳು.

ಯೆಹೂದ ರಾಜ್ಯದ ನಿರಪರಾಧಿಗಳ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸದೆ ಹೋದನು.

¶ “ಇಗೋ, ಇವನು ಪಡೆದ ಮಗನು, ತನ್ನ ತಂದೆಯು ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು ಇಂಥಾ ಕಾರ್ಯಗಳನ್ನು ನಡೆಸದೆ,

¶ “ಯೆರುಸಲೇಮ್ ನಗರ ಸುರಿಸಿದ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದ್ದಾರೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.

‹‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ.›

ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.

ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.