TSK

TSK · ಮತ್ತಾಯನು 27:30

مراجع Treasury of Scripture Knowledge في ಕನ್ನಡ IRV.

العودة إلى المقطع

ಮೂರ್ಖರ ಮಕ್ಕಳಾದ ಈ ನೀಚ ಜಾತಿಯವರು ದೇಶಭ್ರಷ್ಟರು. ಅವರು ಕೊರಡೆಗಳ ಪೆಟ್ಟಿನಿಂದ ದೇಶದಿಂದ ಹೊರಹಾಕಲ್ಪಟ್ಟಿದ್ದರೆ.

ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.

ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.

ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು. ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.

¶ ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ನಮಸ್ಕರಿಸಿದರು.