TSK

TSK · ಮತ್ತಾಯನು 27:40

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,

‹ವ್ಯಭಿಚಾರಿಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ”› ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು.

ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.

ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.

‹ಅಬ್ರಹಾಮನು ಅವನಿಗೆ, ‘ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ’ ಎಂದು ಹೇಳಿದನು.”›

ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.