TSK

TSK · ಮತ್ತಾಯನು 27:53

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು.

ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.

ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.

ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.