ಗಾಳಿಯನ್ನು ನಿನ್ನ ದೂತರನ್ನಾಗಿಯೂ, ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.
TSK
TSK · ಮತ್ತಾಯನು 28:3
مراجع Treasury of Scripture Knowledge في ಕನ್ನಡ IRV.
¶ “ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.
ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.
ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು.
¶ ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು.
‹ಆದರೂ›‹ತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರು›‹ಯೋಗ್ಯರಾಗಿರುವುದರಿಂದ›‹ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.›
¶ ಇದಾದ ನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನ ತೇಜಸ್ಸಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು.