TSK

TSK · ಮತ್ತಾಯನು 28:7

مراجع Treasury of Scripture Knowledge في ಕನ್ನಡ IRV.

العودة إلى المقطع

ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”

‹ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ.›

ಆಗ ಯೇಸು ಅವರಿಗೆ, ‹“ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು”› ಎಂದು ಹೇಳಿದನು.

‹ಆದರೂ ನಾನು ಸತ್ತು ಜೀವಿತನಾಗಿ ಎದ್ದಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುವೆನು”› ಎಂದು ಹೇಳಿದನು.

ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು.

ಸಮಾಧಿಯ ಬಳಿಯಿಂದ ಹಿಂತಿರುಗಿ ಹೋಗಿ ಆ ಸಂಗತಿಗಳನ್ನೆಲ್ಲಾ ಹನ್ನೊಂದು ಮಂದಿ ಶಿಷ್ಯರಿಗೂ ಉಳಿದವರೆಲ್ಲರಿಗೂ ತಿಳಿಸಿದರು.

“ಕರ್ತನು ಎದ್ದದ್ದು ನಿಜ. ಆತನು ಸೀಮೋನನಿಗೆ ಕಾಣಿಸಿಕೊಂಡನು” ಎಂದು ಹೇಳುತ್ತಿದ್ದರು.

‹ಆದರೆ ಅವರ ಕಾಲ ಬಂದಾಗ ಆತನು ನಮಗೆ ಇಂಥಿಂಥದ್ದನ್ನು ಹೇಳಿದನಲ್ಲಾ ಎಂದು ನಿಮ್ಮ ನೆನಪಿಗೆ ಬರುವಂತೆ, ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ.›

¶ ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು:

ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿದ್ರೆ ಹೋಗಿದ್ದಾರೆ.