ಆದುದರಿಂದ ಈಗ ಬಾ, ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವುದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ” ಅಂದನು.
TSK
TSK · ಮತ್ತಾಯನು 4:18
مراجع Treasury of Scripture Knowledge في ಕನ್ನಡ IRV.
ಅದಲ್ಲದೆ ಆರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರದಿಂದ ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣಸಮುದ್ರದ ವರೆಗೆ ಯೊರ್ದನ್ ನದಿಯು ಅವರ (ಪಶ್ಚಿಮದ ವರೆಗೆ) ಮೇರೆ.
¶ ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
¶ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನು, ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.
¶ ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ,
‹ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು›‹ಪೇತ್ರನು, ಈ›‹ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.›
¶ ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು.
ಅವರು ಯಾರಾರೆಂದರೆ, ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
¶ ತರುವಾಯ ಯೇಸು ಗಲಿಲಾಯದ ಸಮುದ್ರವನ್ನು ದಾಟಿ, ಆಚೆ ದಡಕ್ಕೆ ಹೋದನು. ಅದಕ್ಕೆ ತಿಬೇರಿಯ ಸಮುದ್ರವೆಂತಲೂ ಹೇಳುತ್ತಾರೆ.
¶ ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು: