TSK

TSK · ಮತ್ತಾಯನು 4:24

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನು ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ದೇಶದಲ್ಲೆಲ್ಲಾ ಹಬ್ಬಿತು.

ಅವನು‍ ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಣ ಎಲ್ಲಾ ಜನಾಂಗಗಳಲ್ಲಿ ಅವನ ಹೆಸರು ಸುಪ್ರಸಿದ್ಧವಾಯಿತು.

ದಾವೀದನ ಕೀರ್ತಿಯು ಎಲ್ಲಾ ದೇಶಗಳಲ್ಲಿ ಹಬ್ಬಿತು. ಯೆಹೋವನು ಅವನಿಗೆ ಎಲ್ಲಾ ಜನಾಂಗಗಳೂ ಹೆದರಿ ನಡೆಯುವಂತೆ ಮಾಡಿದನು.

“ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ” ಎಂದು ಹೇಳಿದನು.

¶ ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ.

¶ ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.

¶ ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,

“ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ.

ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು.

ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು.

ಇದು ಕುರೇನ್ಯನು ಸಿರಿಯಕ್ಕೆ ಅಧಿಪತಿಯಾಗಿದ್ದಾಗ ನಡೆದ ಮೊದಲನೆಯ ಜನಗಣತಿ.

ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಆತನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆವು. ನೀನು ದೇವರಿಂದ ಬಂದ ಪರಿಶುದ್ಧನೇ” ಎಂದು ಜೋರಾಗಿ ಕೂಗಿ ಹೇಳಿದನು.

ಈ ಸುದ್ದಿಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು.

ನಡೆದ ಸಂಗತಿಯನ್ನು ನೋಡಿದವರು ಆ ದೆವ್ವಹಿಡಿದಿದ್ದವನಿಗೆ ಬಿಡುಗಡೆಯಾದ ರೀತಿಯನ್ನು ಅವರಿಗೆ ತಿಳಿಸಲು,

ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.

ಹೊರಟು ಸಿರಿಯ ಮತ್ತು ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.