ದೇವಾಲಯದ ಮುಂಭಾಗದಲ್ಲಿದ್ದ ಮಂಟಪದ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಎತ್ತರವು ಇಪ್ಪತ್ತು ಮೊಳ ಆಗಿತ್ತು. ಸೊಲೊಮೋನನು ಅದರ ಒಳಭಾಗವನ್ನು ಶುದ್ಧ ಬಂಗಾರದ ತಗಡಿನಿಂದ ಹೊದಿಸಿದನು.
TSK
TSK · ಮತ್ತಾಯನು 4:5
مراجع Treasury of Scripture Knowledge في ಕನ್ನಡ IRV.
ಪರಿಶುದ್ಧ ನಗರದಲ್ಲಿದ್ದ ಎಲ್ಲಾ ಲೇವಿಯರು ಒಟ್ಟು ಇನ್ನೂರ ಎಂಭತ್ತನಾಲ್ಕು ಮಂದಿ.
ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
¶ ಇದಲ್ಲದೆ ಸೈತಾನನು ಆತನನ್ನು ಯೆರೂಸಲೇಮಿಗೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ತುದಿಯಲ್ಲಿ ನಿಲ್ಲಿಸಿ ಆತನಿಗೆ, “ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು.
ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.