ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
TSK
TSK · ಮತ್ತಾಯನು 5:14
مراجع Treasury of Scripture Knowledge في ಕನ್ನಡ IRV.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇದು ಯೆರೂಸಲೇಮ್; ಪಟ್ಟಣವನ್ನು ನಾನು ಜನಾಂಗಗಳ ಮಧ್ಯದಲ್ಲಿ ಸ್ಥಾಪಿಸಿದ್ದೇನೆ, ಅದರ ಸುತ್ತಲು ನಾನಾ ದೇಶಗಳಿವೆ.
¶ ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, ‹“ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು”› ಎಂದು ಹೇಳಿದನು.
ಧರ್ಮಶಾಸ್ತ್ರದಲ್ಲಿ ಜ್ಞಾನಸತ್ಯಗಳ ಸ್ವರೂಪವೇ ನಿನಗೆ ತಿಳಿದಿರುವುದರಿಂದ ಕುರುಡರಿಗೆ ದಾರಿತೋರಿಸುವವನೂ, ಕತ್ತಲೆಯಲ್ಲಿರುವವರಿಗೆ ಬೆಳಕೂ,
¶ ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.
ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.
ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.