ಅವು ನಾಶವಾಗುವವು; ಆದರೆ ನೀನು ಶಾಶ್ವತವಾಗಿರುತ್ತಿ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. ಉಡುಪಿನಂತೆ ಅವುಗಳನ್ನು ಬದಲಿಸುತ್ತಿ; ಅವು ಮಾರ್ಪಡುವವು.
TSK
TSK · ಮತ್ತಾಯನು 5:18
مراجع Treasury of Scripture Knowledge في ಕನ್ನಡ IRV.
ನೀನು ನಿನ್ನ ಕಟ್ಟಳೆಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಿ ಎಂದು, ನಾನು ಮೊದಲಿನಿಂದಲೇ ಅವುಗಳ ಮೂಲಕ ತಿಳಿದುಕೊಂಡಿದ್ದೇನೆ.
ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.
¶ ‹“ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, ‹“ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.›
‹ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
‹ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
¶ ‹“ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ”› ಅಂದನು.
ಅವರಿಗೆ, ‹“ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
¶ ಆಗ ಯೇಸು ತನ್ನ ಶಿಷ್ಯರಿಗೆ, ‹“ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
ಅದಕ್ಕೆ ಯೇಸು, ‹“ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು.›
‹ಇದೆಲ್ಲಾ ಈ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
‹ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
‹ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು.›
‹ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.›
‹ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು.›
ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನಿಟ್ಟುಸಿರುಬಿಟ್ಟು, ‹“ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಏಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ, ಇದು ಖಂಡಿತ”› ಎಂದು ಹೇಳಿದನು.
‹ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ›‹ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ”› ಹೇಳುತ್ತೇನೆ.
ಅದಕ್ಕೆ ಯೇಸು, ‹“ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ,›
ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, ‹“ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.›
‹ಸುವಾರ್ತೆಯು ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವುದೋ ಅಲ್ಲೆಲ್ಲಾ ಈಕೆಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ”› ಎಂದನು.
‹ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ”› ಎಂದನು.
‹ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
‹ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
‹ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವುದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.›
ಆತನು ಅವರಿಗೆ, ‹“ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ,›
ಅದಕ್ಕೆ ಯೇಸು, ‹“ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ”› ಎಂದು ಉತ್ತರಕೊಟ್ಟನು.
ಯೇಸು ಅವನಿಗೆ, ‹“ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು›‹ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,”› ಎಂದು ಉತ್ತರ ಕೊಟ್ಟನು.
‹ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.›
‹ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.›
ಯೇಸು ಅವರಿಗೆ ‹“ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ, ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.›
ಅದಕ್ಕೆ ಯೇಸು ಅವರಿಗೆ, ‹“ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ.›
‹ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ”› ಅಂದನು.
¶ ‹“ನಿಮಗೆ›‹ನಿಜನಿಜವಾಗಿ ಹೇಳುತ್ತೇನೆ, ಕುರಿಹಟ್ಟಿಯೊಳಗೆ ಬಾಗಿಲಿನಿಂದ ಬಾರದೆ, ಬೇರೆ ಕಡೆಯಿಂದ ಹತ್ತಿ ಬರುವವನು ಕಳ್ಳನೂ, ದರೋಡೆಕೋರನೂ ಆಗಿದ್ದಾನೆ.›
‹ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು›
‹ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”›
¶ ‹“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ;›‹ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.›
‹ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ,›‹ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.›
ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು.
ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.