TSK

TSK · ಮತ್ತಾಯನು 5:29

مراجع Treasury of Scripture Knowledge في ಕನ್ನಡ IRV.

العودة إلى المقطع

ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ!

‹ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.›

‹ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.›

¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ.›

‹ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?›

‹ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.›

ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.

ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.

¶ ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.