TSK

TSK · ಮತ್ತಾಯನು 5:39

مراجع Treasury of Scripture Knowledge في ಕನ್ನಡ IRV.

العودة إلى المقطع

¶ “‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.

ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿ ತೀರಿಸಿದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವುದಿಲ್ಲ. ಆತನೇ ನಿನ್ನನ್ನು ಮಹಾ ಪದವಿಗೆ ತರುವಾಗ ನಿನ್ನ ದಾಸಿಯಾದ ನನ್ನನ್ನು ಮರೆತುಬಿಡಬೇಡ” ಅಂದಳು.

¶ ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು?” ಎನ್ನಲು

ನನ್ನನ್ನು ದ್ವೇಷಿಸುವವನಿಗೆ ಕೇಡು ಬಂದಾಗ ಉಬ್ಬಿಕೊಂಡು, ಅವನ ನಾಶನಕ್ಕೆ ಹಿಗ್ಗಿದೆನೋ?

“ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆನು, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು” ಅಂದುಕೊಳ್ಳಬೇಡ.

ಹೊಡೆಯುವವನಿಗೆ ತನ್ನ ಕೆನ್ನೆಯನ್ನು ಕೊಟ್ಟು ಅವಮಾನವನ್ನು ಹೊಟ್ಟೆತುಂಬಾ ತಿನ್ನಲಿ.

‹ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ.›

¶ ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.

ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.

ನೀವು ನೀತಿವಂತನನ್ನು ಖಂಡಿಸಿ ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ.

ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.