ಯೆಹೋವನೇ ಯುಗಯುಗಾಂತರಗಳಲ್ಲಿಯೂ ಅರಸನಾಗಿ ಆಳುವವನು.”
TSK
TSK · ಮತ್ತಾಯನು 6:13
مراجع Treasury of Scripture Knowledge في ಕನ್ನಡ IRV.
ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.
‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.
ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ, ನನ್ನ ಪ್ರಾಂತ್ಯವನ್ನು ವಿಸ್ತರಿಸಿ, ನಿನ್ನ ಕೃಪಾಹಸ್ತದಲ್ಲಿ ನನ್ನನ್ನು ಇರಿಸಿ ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ಕೇಡಿನಿಂದ ರಕ್ಷಿಸಬಾರದೇ?” ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.
ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.
ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.
ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.
ಯೆಹೋವನಿಗೆ ಸದಾಕಾಲವೂ ಕೊಂಡಾಟವಾಗಲಿ. ಆಮೆನ್, ಆಮೆನ್.
ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು.
ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.
“ಹಾಗೆಯೇ ಆಗಲಿ, ಯೆಹೋವನು ಹಾಗೆಯೇ ಮಾಡಲಿ! ಯೆಹೋವನು ತನ್ನ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬೆಲಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಿ ನೀನು ನುಡಿದ ಮಾತುಗಳನ್ನು ನೆರವೇರಿಸಲಿ!
¶ ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.
‹ಆದರೆ ನಿಮ್ಮ ಮಾತು ‘ಹೌದಾದರೆ ಹೌದು ಅಲ್ಲವಾದರೆ ಅಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬರುವಂತಹದ್ದಾಗಿದೆ.›
‹ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ”› ಎಂದು ಹೇಳಿದನು.
¶ ‹“ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು.›
ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
ಆದ್ದರಿಂದ ದೇವರ ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತನಲ್ಲಿ “ಹೌದು” ಎಂಬುದೇ ಆಗಿದೆ. ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ಆತನ ಮೂಲಕವಾಗಿ ನಾವು “ಆಮೆನ್” ಎಂದು ಹೇಳುತ್ತೇವೆ.
¶ ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು.
ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.
ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ರಾಜಾಧಿರಾಜನೂ, ಕರ್ತಾಧಿಕರ್ತನೂ,
¶ ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,
ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.
ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.
‹ಸದಾ ಜೀವಿಸುವವನೂ ಆಗಿದ್ದೇನೆ.›‹ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ.›‹ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.›
‹ಸೈರಣೆಯಿಂದಿರಬೇಕೆಂಬ›‹ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ,›‹ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.›
¶ ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು.
¶ ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.
ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.