TSK

TSK · ಮತ್ತಾಯನು 6:22

مراجع Treasury of Scripture Knowledge في ಕನ್ನಡ IRV.

العودة إلى المقطع

‹ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ, ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವುದು.›

ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.

ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ.