ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.
TSK
TSK · ಮತ್ತಾಯನು 7:1
مراجع Treasury of Scripture Knowledge في ಕನ್ನಡ IRV.
‹ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.›
¶ ‹“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.›
¶ ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.
ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.
¶ ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ.