ಮತ್ತಾಯನು 8:18
TSK
¶ ಯೇಸು ತನ್ನ ಸುತ್ತಲಿದ್ದ ಜನಗಳ ದೊಡ್ಡ ಗುಂಪುಗಳನ್ನು ಕಂಡು ಗಲಿಲಾಯ ಸಮುದ್ರದ ಆಚೆ ಭಾಗಕ್ಕೆ ಹೊರಟು ಹೋಗಬೇಕೆಂದು ಅಪ್ಪಣೆ ಕೊಟ್ಟನು.
TSK
مراجع Treasury of Scripture Knowledge في ಕನ್ನಡ IRV.
¶ ಯೇಸು ತನ್ನ ಸುತ್ತಲಿದ್ದ ಜನಗಳ ದೊಡ್ಡ ಗುಂಪುಗಳನ್ನು ಕಂಡು ಗಲಿಲಾಯ ಸಮುದ್ರದ ಆಚೆ ಭಾಗಕ್ಕೆ ಹೊರಟು ಹೋಗಬೇಕೆಂದು ಅಪ್ಪಣೆ ಕೊಟ್ಟನು.
ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.
¶ ಅವರು ಯೆರಿಕೋವಿನಿಂದ, ಹೊರಟುಹೋಗುತ್ತಿರುವಾಗ ಜನರ ದೊಡ್ಡ ಗುಂಪು ಆತನನ್ನು ಹಿಂಬಾಲಿಸಿತು.
ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು, ಮತ್ತು ಜನರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ, ತಮ್ಮ ತಮ್ಮ ರೋಗರುಜಿನಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ, ಗುಂಪುಗುಂಪಾಗಿ ಬಂದು ಸೇರಿದರು.