ಸಮುದ್ರವು ಭೂಗರ್ಭವನ್ನು ಭೇದಿಸಿಕೊಂಡು ಬರಲು, ಅದರ ದ್ವಾರಗಳನ್ನು ಮುಚ್ಚಿದವರು ಯಾರು?
TSK
TSK · ಮತ್ತಾಯನು 8:26
مراجع Treasury of Scripture Knowledge في ಕನ್ನಡ IRV.
ಸಮುದ್ರದ ಅಲ್ಲಕಲ್ಲೋಲಗಳನ್ನು ಅಧೀನದಲ್ಲಿ ಇಟ್ಟುಕೊಂಡಿರುವವನು ನೀನು; ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು.
ನೀನು ಅದನ್ನು ಆದಿಸಾಗರವೆಂಬ ವಸ್ತ್ರದಿಂದ ಹೊದಿಸಿದ್ದೀ; ನೀರು ಪರ್ವತಗಳನ್ನೂ ಮುಚ್ಚಿಬಿಟ್ಟಿತ್ತು.
ಸಮುದ್ರವು ಕಂಡು ಓಡಿಹೋಯಿತು; ಯೊರ್ದನ್ ಹೊಳೆಯು ಹಿಂದಿರುಗಿತು.
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?
ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳ ಮೇಲೆ ಸಿಟ್ಟುಗೊಂಡಿದ್ದಿಯಾ? ಸಮುದ್ರದ ಮೇಲೆ ಕೋಪವನ್ನು ಪ್ರದರ್ಶಿಸುತ್ತೀಯೋ? ಇಲ್ಲಾ, ನೀನು ಜಯರಥಗಳಲ್ಲಿ ಆಸೀನನಾಗಿ ಮೋಡಗಳ ಮೇಲೆ ರಕ್ಷಣೆಯನ್ನು ಕಳುಹಿಸಿದಾತನು!
ಆ ಜನರು ಬೆರಗಾಗಿ, “ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ” ಅಂದರು.
ಯೇಸು ಅದನ್ನು ತಿಳಿದು, ‹“ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?›
ಎದುರು ಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಗೋಲು ಹಾಕಿ ದಣಿದು ಹೋದದ್ದನ್ನು ಯೇಸು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು.
ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.