ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ, ‹“ನಿಮ್ಮ ನಂಬಿಕೆಯಂತೆ ನಿಮಗೆ ಆಗಲಿ”› ಅಂದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು.
TSK
TSK · ಮತ್ತಾಯನು 9:22
مراجع Treasury of Scripture Knowledge في ಕನ್ನಡ IRV.
ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.
ಯೇಸು ಅವನಿಗೆ, ‹“ಹೋಗು,›‹ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ”› ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು.
ಯೇಸು ಆಕೆಗೆ, ‹“ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು”› ಎಂದು ಹೇಳಿದನು.
ಯೇಸು ಅವನಿಗೆ, ‹“ನಿನಗೆ ಕಣ್ಣುಕಾಣುವಂತಾಗಲಿ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿದೆ”› ಎಂದು ಹೇಳಿದನು.
ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;
ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ.