TSK

TSK · ಮಿಕ 1:13

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು.

ಆದುದರಿಂದ ಹೆಬ್ರೋನಿನ ಅರಸನಾದ ಹೋಹಾಮ್, ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ, ಎಗ್ಲೋನಿನ ಅರಸನಾದ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿದನು.

¶ ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ, ಪುನಃ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.

ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.

ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.

¶ ಆದರೆ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತವಾಗಿ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬುವವರನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇಮಿಗೆ ಬಂದು ಅಗಸರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಇರುವ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು.

¶ ಇದಾದ ಮೇಲೆ, ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸೇವಕರನ್ನು ಯೆರೂಸಲೇಮಿಗೆ ಕಳುಹಿಸಿದನು. ಅವರ ಮುಖಾಂತರ ಯೆಹೂದದ ಅರಸನಾದ ಹಿಜ್ಕೀಯನಿಗೂ ಯೆರೂಸಲೇಮಿನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ ಹೀಗೆ ಹೇಳಿ ಕಳುಹಿಸಿದನು,

ಮದ್ಮೇನ ದಿಕ್ಕಾಪಾಲಾಯಿತು. ಗೇಬೀಮಿನ ನಿವಾಸಿಗಳು ವಲಸೆ ಹೋದರು.

ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವ್ಯಭಿಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವ್ಯಭಿಚಾರವನ್ನು ನಡೆಸಿದಳು.

ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ, ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಾಗಿ ಉಳಿದಿದ್ದ ಲಾಕೀಷಿಗೂ ಮತ್ತು ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು.

ಇದಕ್ಕೆಲ್ಲಾ ಕಾರಣ ಯಾಕೋಬಿನ ದ್ರೋಹ ಮತ್ತು ಇಸ್ರಾಯೇಲ್ ವಂಶದ ಪಾಪಗಳೇ. ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ! ಯೆಹೂದದ ಕೆಟ್ಟ ಪೂಜಾಸ್ಥಾನಗಳು ಯಾವುವು? ಯೆರೂಸಲೇಮಲ್ಲವೇ!

‹ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ.›‹ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು,›‹ಜಾರತ್ವಮಾಡಬಹುದೆಂದೂ›‹ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.›