TSK

TSK · ಮಿಕ 2:9

مراجع Treasury of Scripture Knowledge في ಕನ್ನಡ IRV.

العودة إلى المقطع

ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.

ನನ್ನ ಗುಡಾರವು ಹಾಳಾಗಿದೆ, ಹಗ್ಗಗಳು ಹರಿದುಹೋಗಿವೆ, ಮಕ್ಕಳು ನನ್ನೊಳಗಿಂದ ತೊಲಗಿ ಇಲ್ಲವಾಗಿದ್ದಾರೆ. ನನ್ನ ಗುಡಾರವನ್ನು ಹಾಕುವುದಕ್ಕೂ, ನನ್ನ ಪರದೆಗಳನ್ನು ಬಿಗಿಯುವುದಕ್ಕೂ ಇನ್ನು ಯಾರೂ ಇರುವುದಿಲ್ಲ.

ಯೆಹೂದದ ಮತ್ತು ಯೆರೂಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ. ಅವರನ್ನು ಸ್ವಂತ ನಾಡಿನಿಂದ ದೂರಮಾಡಿದ್ದೀರಿ.

ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’

¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.›

‹ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು”› ಅಂದನು.

ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.