TSK

TSK · ಮಿಕ 3:6

مراجع Treasury of Scripture Knowledge في ಕನ್ನಡ IRV.

العودة إلى المقطع

ನಮ್ಮ ಆರಾಧನಾ ಚಿಹ್ನೆಗಳು ಈಗ ಕಾಣುವುದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವುದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.

ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.

ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.

ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.

‘ಮಿಥ್ಯ ದರ್ಶನಹೊಂದಿ, ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರೀಸಭೆಯಲ್ಲಿ ಸೇರಬಾರದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗಬಾರದು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.

ಆದಕಾರಣ ನೀವು ಮಿಥ್ಯ ದರ್ಶನವನ್ನು ಹೊಂದಿ, ಕಣಿಹೇಳುವ ಕೆಲಸವು ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು, ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.”

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.