TSK

TSK · ಮಿಕ 4:1

مراجع Treasury of Scripture Knowledge في ಕನ್ನಡ IRV.

العودة إلى المقطع

ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.

ಬಾಷಾನಿನ ಪರ್ವತವು ಮಹೋನ್ನತವಾಗಿದೆ; ಆ ಬಾಷಾನ್ ಗಿರಿಯು ಶಿಖರಗಳುಳ್ಳದ್ದೇ.

ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.

ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.

¶ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಕಂಡು ಬಂದ ದೈವೋಕ್ತಿ ಇದೇ.

ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು.

‘ಅವರನ್ನು ಒಪ್ಪಿಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,

ನಿನ್ನ ಹಾಳು ಪ್ರದೇಶಗಳು, ನಿನ್ನ ಬೀಳು ಭೂಮಿಯು, ಕೆಟ್ಟುಹೋದ ನಿನ್ನ ಸೀಮೆಯು ಇವುಗಳಿಗೆ ಏನಾಗುವುದೆಂದು ನೋಡುವಿ. ನಿನ್ನನ್ನು ನುಂಗಿದವರು ದೂರವಾಗುವರು, ನಿನ್ನ ನಿವಾಸಿಗಳಿಗೆ ನೀನು ಸಂಕೋಚಸ್ಥಳವಾಗುವಿ.

ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.

¶ “ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.

¶ ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿ ಕೋಮಲವಾದದ್ದನ್ನು ಚಿವುಟಿ ತಂದು, ಉನ್ನತೋನ್ನತವಾದ ಪರ್ವತದ ಮೇಲೆ ನೆಡುವೆನು.

ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”

¶ “ಇದೇ ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಮತ್ತು ಅದರ ಸುತ್ತುಮುತ್ತಲಿನ ಪ್ರದೇಶವೆಲ್ಲಾ ಅತಿ ಪರಿಶುದ್ಧವಾಗಿರಬೇಕು. ಇಗೋ, ಆ ಆಲಯದ ನಿಯಮವು ಇದೇ.

ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.

ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.

ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾತ್ಪರನಾದ ದೇವರ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.”

ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು.

ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.

ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.

¶ ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು.

“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

¶ ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.

¶ ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,

ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”

¶ ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ.